Karnataka Weather: ದಾವಣಗೆರೆಯಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕರ್ನಾಟಕದಾದ್ಯಂತ ಒಣಹವೆ

ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದೆ, ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ದಾವಣಗೆರೆಯಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕರ್ನಾಟಕದಾದ್ಯಂತ ಒಣಹವೆ
ಹವಾಮಾನ
Image Credit source: Hindustan Times

Updated on: Feb 07, 2025 | 7:21 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ, ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 14 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಕಡೆಯೂ ಶುಭ್ರ ಆಕಾಶವಿದೆ.

ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us