AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಧಾರವಾಡ ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ, ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕ್ರಮೇಣವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಾದ್ಯಂತ ಚಳಿ ಮುಂದುವರೆಯಲಿದೆ.

Karnataka Weather: ಧಾರವಾಡ ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು
ಚಳಿ Image Credit source: PTI
ನಯನಾ ರಾಜೀವ್
|

Updated on: Feb 04, 2025 | 7:22 AM

Share

ಕರ್ನಾಟಕದಾದ್ಯಂತ ಮೋಡದ ವಾತಾವರಣ ಹೋಗಿ ಇದೀಗ ಮತ್ತೆ ಚಳಿ ಶುರುವಾಗಿದೆ. ಎಲ್ಲೆಡೆ ಬೆಳಗ್ಗೆ ಮಂಜು ಕವಿದ ವಾತಾವರಣವಿರಲಿದ್ದು, ಸೆಕೆಯೂ ಇರಲಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಅಷ್ಟಷ್ಟಾಗಿ ಹೆಚ್ಚಾಗುವ ಸಾಧ್ಯತೆ ಇದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಾದ್ಯಂತ ಚಳಿ ಮುಂದುವರೆಯಲಿದೆ.

ಧಾರವಾಡ ಹಾಗೂ ಶಿವಮೊಗ್ಗದಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಿಂದ ಎರಡು ದಿನ ಮಳೆ

ಬೆಳಗಾವಿ ಏರ್​ಪೋರ್ಟ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್