Karnataka Weather: ಬೆಂಗಳೂರಿನಲ್ಲಿ ಶುಭ್ರ ಆಕಾಶ, ರಾಜ್ಯದ ವಿವಿಧೆಡೆ ಗರಿಷ್ಠ ತಾಪಮಾನ ಹೆಚ್ಚಳ

ಕರ್ನಾಟಕದೆಲ್ಲೆಡೆ ಈ ವರ್ಷ ಅಷ್ಟಾಗಿ ಚಳಿ ಬಿದ್ದಿಲ್ಲ, ಮಳೆಯೂ ಇಲ್ಲ, ಇತ್ತ ಉಷ್ಣಾಂಶವೂ ಹೆಚ್ಚಾಗುತ್ತಿದೆ, ಈಗಲೇ ಕಡು ಬೇಸಿಗೆಯ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

Karnataka Weather: ಬೆಂಗಳೂರಿನಲ್ಲಿ ಶುಭ್ರ ಆಕಾಶ, ರಾಜ್ಯದ ವಿವಿಧೆಡೆ ಗರಿಷ್ಠ ತಾಪಮಾನ ಹೆಚ್ಚಳ
ಬೇಸಿಗೆ
Image Credit source: Native Planet

Updated on: Feb 04, 2024 | 7:39 AM

ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು, ರಾಜ್ಯದ ಬಹುತೇಕ ಕಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡುಬಂದಿದೆ. ಸೆಕೆಯ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

ಬೆಂಗಳೂರಿನಲ್ಲೂ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 14.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.1ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಳ; ಆರೋಗ್ಯದ ಮೇಲೆ ನಿಗಾವಹಿಸಲು ತಜ್ಞರ ಸಲಹೆ

ಚಾಮರಾಜನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us