Karnataka Weather: ಕರ್ನಾಟಕದಾದ್ಯಂತ ಕಡಿಮೆಯಾದ ಅಕಾಲಿಕ ಮಳೆ, ಹೆಚ್ಚಾದ ಚಳಿ, ಒಣಹವೆ ಮುಂದುವರಿಕೆ

ರಾಜ್ಯಾದ್ಯಂತ ಅಕಾಲಿಕ ಮಳೆ ಕಡಿಮೆಯಾಗಿದ್ದು, ಚಳಿ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕಲಬುರಗಿ, ಬೀದರ್, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದಾದ್ಯಂತ ಕಡಿಮೆಯಾದ ಅಕಾಲಿಕ ಮಳೆ, ಹೆಚ್ಚಾದ ಚಳಿ, ಒಣಹವೆ ಮುಂದುವರಿಕೆ
ಹವಾಮಾನ

Updated on: Jan 12, 2024 | 7:26 AM

ರಾಜ್ಯಾದ್ಯಂತ ಅಕಾಲಿಕ ಮಳೆ ಕಡಿಮೆಯಾಗಿದ್ದು, ಚಳಿ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕಲಬುರಗಿ, ಬೀದರ್, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಎಲ್ಲೂ ಮಳೆಯ ಮುನ್ಸೂಚನೆ ಇಲ್ಲ, ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಭಾರತದಲ್ಲಿ ಕೊರೆಯುವ ಚಳಿ ಇದೆ. ಇಂದು ಬೆಳಗ್ಗೆ ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ದಟ್ಟವಾದ ಮಂಜು ಆವರಿಸಿದೆ. ರಾಜಸ್ಥಾನದಿಂದ ಬಂಗಾಳದವರೆಗೆ ವಿಪರೀತ ಚಳಿ. ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಗ್ಗೆ 8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದೆಲ್ಲೆಡೆ ಶೀತ ಗಾಳಿ, 4 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​

ಇನ್ನು ಏಳು ದಿನಗಳ ಕಾಲ ದೆಹಲಿಯಲ್ಲಿ ಚಳಿಯಿಂದ ಮುಕ್ತಿ ಸಿಗುವ ಸಾಧ್ಯತೆ ಇಲ್ಲ. ಹವಾಮಾನ ಇಲಾಖೆಯ ಪ್ರಕಾರ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶದಲ್ಲಿ ಪ್ರಸ್ತುತ ಕನಿಷ್ಠ ತಾಪಮಾನವು 5-10 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗುತ್ತಿದೆ.

ದೇಶದ ಹಲವು ರಾಜ್ಯಗಳಲ್ಲಿ ಚಳಿ ಮುಂದುವರಿದಿದ್ದರೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯ ಕೊರತೆ ಇಲ್ಲ. ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಲಕ್ಷದ್ವೀಪ, ತೆಲಂಗಾಣ, ಕರ್ನಾಟಕ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us