Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಚಳಿ, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ

ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಚಳಿ, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ
ಚಳಿImage Credit source: The New Indian Express
Follow us
ನಯನಾ ರಾಜೀವ್
|

Updated on: Dec 25, 2023 | 6:27 AM

ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಚಳಿಯ ವಾತಾವರಣ ಯಥಾಸ್ಥಿತಿ ಮುಂದುವರೆದಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಚಳಿ ಮುಂದುವರೆದಿದ್ದು, ಮುಂದಿನ ವಾರವೂ ಚಳಿ ಇರಲಿದೆ.

ತೆಲಂಗಾಣ ಭಾಗದಲ್ಲಿ ಕನಿಷ್ಠ ಉಷ್ಣಾಂಶ ಪ್ರಮಾಣದಲ್ಲಿ ಭಾರೀ ಕುಸಿತ ಕಂಡುಬಂದಿದ್ದು ಅಧಿಕ ಚಳಿ ಪ್ರಭಾವ ಕರ್ನಾಟಕದ ಬೀದರ್‌ ಜಿಲ್ಲೆ ಮೇಲೂ ಆಗಿದೆ.

ಬಾಗಲಕೋಟೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್​, ಕಲಬುರಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್​, ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿತ್ತು. ಮುಂದಿನ ದಿನಗಳಲ್ಲಿ ಇನ್ನೂ ಕಡಿಮೆಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಕೊರೆಯುವ ಚಳಿ, ಒಣಹವೆ ಮುಂದುವರಿಕೆ

ಡಿ.25 ರ ಸೋಮವಾರ ಸಂಜೆ ಇಲ್ಲವೇ ರಾತ್ರಿಯಂದು ಕರ್ನಾಟಕದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ