Karnataka Weather: ಕರ್ನಾಟಕದಾದ್ಯಂತ ತಗ್ಗಿದ ಚಳಿ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕರ್ನಾಟಕದಾದ್ಯಂತ ಚಳಿ ಸ್ವಲ್ಪ ಕಡಿಮೆಯಾಗಿದ್ದು, ಗರಿಷ್ಠ ಉಷ್ಣಾಂಶ ಹೆಚ್ಚಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದಾದ್ಯಂತ ತಗ್ಗಿದ ಚಳಿ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
ಹವಾಮಾನ
Image Credit source: Indian Holiday

Updated on: Jan 24, 2024 | 7:29 AM

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದೆ, ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 10.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ, ಉಳಿದೆಡೆ ಒಣಹವೆ

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮೈಸೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 11.1 ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಶಿವಮೊಗ್ಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 31.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us