AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ, ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಮಳೆImage Credit source: Udayavani
ನಯನಾ ರಾಜೀವ್
|

Updated on: Dec 10, 2023 | 7:56 AM

Share

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಜಯಪುರ, ಅಜ್ಜಂಪುರ, ನಾಯಕನಹಟ್ಟಿ, ಹೊಸದುರ್ಗ, ಕಡೂರು, ಕೊಟ್ಟಿಗೆಹಾರ, ಎನ್​ಆರ್​ಪುರ, ತರೀಕೆರೆ, ಯುಗಟಿ, ಬೇಲೂರು, ಮೂರ್ನಾಡು, ಹುಂಚದಕಟ್ಟೆ, ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲ, ವೈ.ಎನ್. ಹೊಸಕೋಟೆ, ಸಿರಾ, ಬಾಳೆಹೊನ್ನೂರು, ಸಕಲೇಶಪುರದಲ್ಲಿ ಮಳೆಯಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಕಾಣಿಸಿಕೊಂಡಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆ

ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ

ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!