Karnataka Weather: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಾಮರಾಜ ನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

Karnataka Weather: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
ಮಳೆ
Image Credit source: Mint
ವಿವೇಕ ಬಿರಾದಾರ

Updated on: Nov 18, 2023 | 7:07 AM

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಾಮರಾಜ ನಗರ ಜಿಲ್ಲೆಗಳಲ್ಲಿ ಇಂದು (ನ.18) ಮಳೆಯಾಗಲಿದೆ.

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ಇದನ್ನೂ ಓದಿ: ನ.18ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us