Karnataka Weather: ಉತ್ತರ ಒಳನಾಡಿನಲ್ಲಿ ಒಣಹವೆ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

|

Updated on: Nov 17, 2023 | 7:47 AM

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ

Karnataka Weather: ಉತ್ತರ ಒಳನಾಡಿನಲ್ಲಿ ಒಣಹವೆ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
Follow us on

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂಗ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜುಮುಸುಕಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಲ್​ನಲ್ಲಿ 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ಚಂಡಮಾರುತ ಬೀಸುವ ಸಾಧ್ಯತೆ ಇದೆ. ಒಡಿಶಾ, ಬಾಂಗ್ಲಾದೇಶ, ಪಶ್ಚಿಮ ಬಂಗಾಳ, ಶ್ರೀಲಂಕಾದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆ

ನವೆಂಬರ್ 20ರವರೆಗೂ ತಮಿಳುನಾಡಿನಲ್ಲಿ ಮಳೆಯಾಗಲಿದೆ, ಮೇಘಾಲಯ, ಅಸ್ಸಾಂ, ಕರ್ನಾಟಕ, ಮಿಜೋರಾಂ, ತ್ರಿಪುರ, ಉತ್ತರಾಖಂಡ, ಆಂಧ್ರಪ್ರದೇಶ, ಛತ್ತೀಸ್​ಗಢದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ