Karnataka Weather: ಧಾರವಾಡದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು, ರಾಜ್ಯಾದ್ಯಂತ 5 ದಿನ ಭೀಕರ ಚಳಿ

ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ.

Karnataka Weather: ಧಾರವಾಡದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು, ರಾಜ್ಯಾದ್ಯಂತ 5 ದಿನ ಭೀಕರ ಚಳಿ
ಚಳಿImage Credit source: PTI
Follow us
ನಯನಾ ರಾಜೀವ್
|

Updated on: Jan 26, 2025 | 7:18 AM

ಕರ್ನಾಟಕದಾದ್ಯಂತ ಚಳಿ ಮುಂದುವರೆದಿದ್ದು, ಒಣಹವೆ ಇದೆ, ಕಳೆದ ಒಂದು ವಾರದಿಂದ ಬಿಸಿಲು ಹೆಚ್ಚಾಗುತ್ತಿದೆ. ಧಾರವಾಡದಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ ಮುಂದಿನ 5 ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಮುಂದುವರೆಯಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಒಂದು ವಾರ ವಿಪರೀತ ಚಳಿ, ಧಾರವಾಡದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ