
ಕರ್ನಾಟಕದಾದ್ಯಂತ ಹವಾಮಾನದಲ್ಲಿ ನಿತ್ಯವೂ ಸಣ್ಣ ಪುಟ್ಟ ಬದಲಾವಣೆಗಳಾಗುತ್ತಲೇ ಇರುತ್ತವೆ. ಮಲೆನಾಡಿನಲ್ಲಿ ಇಂದು ಬೆಳಗಿನ ಜಾವ ಚಳಿ ಇತ್ತು. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ 24 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ತಾಪಮಾನ, ಚಾಮರಾಜನಗರದಲ್ಲಿ 16.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಚಿಂತಾಮಣಿ ಮತ್ತು ಮಂಡ್ಯದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ. ಬೀದರ್ನಲ್ಲಿ -.3.0, ಕೊಪ್ಪಳದಲ್ಲಿ -2.6ನಷ್ಟು ಗರಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಾಳಿ ಗಂಟೆಗೆ 3–40 ಕಿ.ಮೀ ವೇಗದಲ್ಲಿ ಬೀಸಲಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ:Karnataka Weather: ಕಲಬುರಗಿಯಲ್ಲಿ ಗರಿಷ್ಠ ತಾಪಮಾನ, ಮೈಸೂರಿನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ
ಧಾರವಾಡದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ