Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ

ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಸೆಕೆ ಹೆಚ್ಚಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ
ಬಿಸಿಲು
Image Credit source: NBC News

Updated on: Feb 06, 2025 | 7:15 AM

ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಾಗುತ್ತಿದ್ದು, ಚಳಿ ಅಷ್ಟಷ್ಟಾಗಿ ಕಡಿಮೆಯಾಗುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಸೆಕೆ ಹೆಚ್ಚಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಗರಿಷ್ಠ ಉಷ್ಣಾಂಶ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ, ದಾವಣಗೆರೆ ಹಾಗೂ ಮೈಸೂರಿನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದಾದ್ಯಂತ ಕ್ರಮೇಣವಾಗಿ ಹೆಚ್ಚುತ್ತಿದೆ ಗರಿಷ್ಠ ತಾಪಮಾನ

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Thu, 6 February 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us