Karnataka Weather: ಕರ್ನಾಟಕದ ಬಹುತೇಕ ಕಡೆ ಚಳಿ, ಡಿ.17ರಿಂದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಕಡೆ ಚಳಿ ಮುಂದುವರೆದಿದ್ದು, ಇದರ ಮಧ್ಯೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದ ಬಹುತೇಕ ಕಡೆ ಚಳಿ, ಡಿ.17ರಿಂದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಚಳಿ
Image Credit source: News Track

Updated on: Dec 15, 2023 | 7:27 AM

ಕರ್ನಾಟಕದ ಬಹುತೇಕ ಕಡೆ ಚಳಿ ಮುಂದುವರೆದಿದ್ದು, ಇದರ ಮಧ್ಯೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಜತೆ ಮೋಡವೂ ಕೂಡ ಇದೆ, ಇದರ ನಡುವೆ ಸೂರ್ಯ ಕೊಂಚ ಇಣುಕಿದ್ದಾನೆ.

ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಕರ್ನಾಟಕ ಹವಾಮಾನ ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ

ಇಂದಿನಿಂದ ತಮಿಳುನಾಡಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಪಾಂಡಿಚೇರಿ, ಕಾರೈಕಲ್​ನಲ್ಲಿ ಮಳೆಯಾಗಲಿದೆ.

ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಚೆನ್ನೈನಲ್ಲಿ ನಗರ ಮತ್ತು ಅದರ ಉಪನಗರಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ