AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka weather forecast: ಇನ್ನೆರಡು ದಿನ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮುಂದುವರಿಕೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ಮುಂಗಾರು ಇನ್ನೂ ಚುರುಕುಗೊಳ್ಳದ ಹಿನ್ನೆಲೆ ಜುಲೈ 16 ಮತ್ತು 17ರಂದು ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮಳೆ ಕೊರತೆಯಿಂದ ರೈತರ ಆತಂಕ ಮುಂದುವರಿದಿದೆ.

Karnataka weather forecast: ಇನ್ನೆರಡು ದಿನ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮುಂದುವರಿಕೆ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on: Jul 16, 2026 | 7:01 AM

Share

ಮುಖ್ಯಾಂಶಗಳು

  • ಕರಾವಳಿಯಲ್ಲಿ ಸಾಧಾರಣ ಮಳೆ ಸಾಧ್ಯತೆ
  • ಹಲವು ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ
  • ಮಳೆ ಕೊರತೆಯಿಂದ ರೈತರಲ್ಲಿ ಮುಂದುವರಿದ ಆತಂಕ

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಳ್ಳುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ಪ್ರಕಟಿಸಿದೆ. ಆದಾಗಗ್ಯೂ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿಯ ಹಲವೆಡೆ ಸಾಧಾರಣ ಮಳೆ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜುಲೈ 16 ಮತ್ತು 17ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಾ?

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ (ಜುಲೈ 16ರಂದು) ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಜುಲೈ 17ರಂದು ಬೀದರ್‌ನಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದರೂ, ಬಿರುಗಾಳಿ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಹವಾಮಾನ ಮುನ್ಸೂಚನೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಎರಡೂ ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಇನ್ನೂ ಕೆಲವು ದಿನಗಳ ಕಾಲ ಮಳೆಯ ಸಾಧ್ಯತೆ ಕಡಿಮೆ ಎಂದು ಎರಡು ದಿನಗಳ ಹಿಂದಷ್ಟೇ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ಆತುರಪಡದೆ ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಕೃಷಿ ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ

ಮಳೆ ಕೊರತೆ ಮುಂದುವರಿದರೆ ಜಲಾಶಯಗಳ ಒಳಹರಿವು, ಬೆಳೆಗಳ ಬೆಳವಣಿಗೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನಗಳ ಹವಾಮಾನ ಬೆಳವಣಿಗೆ ರಾಜ್ಯದ ಕೃಷಿ ಕ್ಷೇತ್ರಕ್ಕೆ ನಿರ್ಣಾಯಕವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ