Karnataka Weather Forecast: ಕರಾವಳಿ ಸೇರಿ ಕರ್ನಾಟದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಬೆಂಗಳೂರಿಗೂ ಅಲರ್ಟ್

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 24: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆಗಸ್ಟ್ 24 ಮತ್ತು 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Forecast: ಕರಾವಳಿ ಸೇರಿ ಕರ್ನಾಟದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಬೆಂಗಳೂರಿಗೂ ಅಲರ್ಟ್
ಮಳೆ (ಸಾಂದರ್ಭಿಕ ಚಿತ್ರ
Image Credit source: PTI

Updated on: Aug 24, 2026 | 6:56 AM

ಮುಖ್ಯಾಂಶಗಳು

  • ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ
  • ಮಲೆನಾಡು ಜಿಲ್ಲೆಗಳಲ್ಲೂ ಮಳೆ ಅಬ್ಬರ
  • ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ

ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿ ಮುಂಗಾರು (Monsoon Rain) ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಹಾಗೂ ಮಂಡ್ಯದಲ್ಲಿ ಹಲವು ಕಡೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಿಗೂ ಮಳೆ ಅಲರ್ಟ್

ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ

ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಹಲವು ಕಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

ಆಗಸ್ಟ್ 25ರಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ಆಗಸ್ಟ್ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಮುಂದುವರಿಯಲಿದೆ. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಕೆಲವೆಡೆ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಮತ್ತು ಯಾದಗಿರಿಯಲ್ಲೂ ಮಳೆಯ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?

ಆಗಸ್ಟ್ 23ರ ಸಂಜೆಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದರೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 8 ಸೆಂ.ಮೀ., ವಿಜಯಪುರ ಜಿಲ್ಲೆಯ ಇಂಡಿಯಲ್ಲಿ 7 ಸೆಂ.ಮೀ. ಭಾರಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us