
ಬೆಂಗಳೂರು, ಆಗಸ್ಟ್ 02: ಸದ್ಯ ರಾಜ್ಯದಲ್ಲಿ ಬಿಡುವು ನೀಡಿರುವ ಮಳೆ (Rain), ಮುಂದಿನ ವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ. ರವಿವಾರ (ಆಗಸ್ಟ್ 03) ದಂದು ರಾಜ್ಯದಾದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಕರಾವಳಿ (Coastal) ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆಯಿದೆ. ಆದರೆ, ಆಗಸ್ಟ್ 05 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಆಗಸ್ಟ್ 07 ರವರೆಗೆ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರವಿವಾರ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಂಭವ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ (ಆ.03) ಬಹುತೇಕ ಸ್ಥಳಗಳಲ್ಲಿ ಮಳೆಯಾಗಲಿದೆ.
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾಮಾನ ಇಲಾಖೆ ತಿಳಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 4 ರಿಂದ ಆಗಸ್ಟ್ 6ರವರೆಗೆ ಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿಮೀ ಇರಲಿದೆ. ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 03 ರಿಂದ ಆಗಸ್ಟ್ 6ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಇದನ್ನೂ ಓದಿ: ಕರ್ನಾಟಕದ ಕರಾವಳಿಯಲ್ಲಿ ಆ.7ರವರೆಗೆ ಭಾರಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರು ಗ್ರಾಮಾಂತರದಲ್ಲಿ ಆಗಸ್ಟ್ 3ರ ರಿಂದ ಆಗಸ್ಟ್ 6ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published On - 7:16 pm, Sat, 2 August 25