AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ; ಕೊಡಗು-ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಆಗಸ್ಟ್ 1 ಮತ್ತು 2ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ; ಕೊಡಗು-ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುರಿದ ಮಳೆ (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on:Aug 01, 2026 | 7:49 AM

Share

ಮುಖ್ಯಾಂಶಗಳು

  • ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ
  • ಕೊಡಗು, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ಇಂದು ರಜೆ
  • ಕೊಲ್ಲೂರಿನಲ್ಲಿ 9 ಸೆಂ.ಮೀ. ಭಾರಿ ಮಳೆ ದಾಖಲು

ಬೆಂಗಳೂರು, ಆಗಸ್ಟ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (IMD)  ಬೆಂಗಳೂರು ಕೇಂದ್ರವು ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಿದೆ. ಈ ನಡುವೆ ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಎಲ್ಲೆಲ್ಲಿ ಶಾಲೆಗಳಿಗೆ ರಜೆ?

ಕೊಡಗು ಜಿಲ್ಲೆಯಲ್ಲಿ ಹಲವು ದಿನಗಳಿಂದ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಕೊಪ್ಪ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಳೆ ಸಂಬಂಧಿತ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತೆ ಭಾರೀ ಮಳೆ ಸಾದ್ಯತೆ ಇರುವ ಕಾರಣ ಪಿಯುಸಿವರೆಗೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಆಗಸ್ಟ್ 1ರಂದು ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ?

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50-60 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಕೊಡಗು ಮತ್ತು ಹಾಸನದಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು.

ಆಗಸ್ಟ್ 2ರಂದು ಮಳೆ ಹೇಗಿರಲಿದೆ?

ಆಗಸ್ಟ್ 2ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗದಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉಳಿದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ, ಎಷ್ಟು?

ಶುಕ್ರವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಕರಾವಳಿ ಕರ್ನಾಟಕದಲ್ಲಿ ತುಸು ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ದಾಖಲಾಗಿದೆ.

  • ಕೊಲ್ಲೂರು, ಉಡುಪಿ – 9 ಸೆಂ.ಮೀ.
  • ಭಾಗಮಂಡಲ, ಕೊಡಗು – 7 ಸೆಂ.ಮೀ.
  • ಆಗುಂಬೆ, ಶಿವಮೊಗ್ಗ – 7 ಸೆಂ.ಮೀ.
  • ಔರಾದ್, ಬೀದರ್ – 6 ಸೆಂ.ಮೀ.
  • ಶೃಂಗೇರಿ, ಚಿಕ್ಕಮಗಳೂರು – 6 ಸೆಂ.ಮೀ.
  • ವಿರಾಜಪೇಟೆ, ಕೊಡಗು – 6 ಸೆಂ.ಮೀ.
  • ಸೋಮವಾರಪೇಟೆ, ಕೊಡಗು – 6 ಸೆಂ.ಮೀ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Sat, 1 August 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಆರ್.ಆರ್ ನಗರದ ಪಟ್ಟಣಗೆರೆ ಬಳಿ ಚಾಟ್ಸ್​ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ!
ಆರ್.ಆರ್ ನಗರದ ಪಟ್ಟಣಗೆರೆ ಬಳಿ ಚಾಟ್ಸ್​ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ!