AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ, ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್​ 7: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಆಗಸ್ಟ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ, ಯೆಲ್ಲೋ ಅಲರ್ಟ್
ಕೋಲಾರದಲ್ಲಿ ಗುರುವಾರ ಸಂಜೆ ಸುರಿದ ಮಳೆImage Credit source: tv9
ಗಣಪತಿ ಶರ್ಮಾ
|

Updated on:Aug 07, 2026 | 7:27 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
  • ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ
  • ಬೆಂಗಳೂರಿನ ಹಲವು ಭಾಗಗಳಲ್ಲೂ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 7: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast), ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ.

ಕರ್ನಾಟಕದಲ್ಲಿ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸಿದ ವಾಯು ಗುಣಮಟ್ಟ; ಮೈಸೂರಿನಲ್ಲೂ ಏಕ್ಯೂಐ ಉತ್ತಮ

ಆಗಸ್ಟ್ 8ರಂದು ಕೂಡ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 am, Fri, 7 August 26

Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?