AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 8: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ನಾಲ್ಕು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಮಳೆಯಾಯಿತು.Image Credit source: tv9
ಗಣಪತಿ ಶರ್ಮಾ
|

Updated on: Aug 08, 2026 | 7:41 AM

Share

ಮುಖ್ಯಾಂಶಗಳು

  • ಕರಾವಳಿಯಲ್ಲಿ ಇಂದು ಭಾರಿ ಮಳೆ ಸಾಧ್ಯತೆ
  • ದಕ್ಷಿಣ ಕನ್ನಡದ ನಾಲ್ಕು ತಾಲೂಕುಗಳಿಗೆ ರಜೆ
  • ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದ್ದು, ಇಂದು (ಆಗಸ್ಟ್ 8) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ

ಆಗಸ್ಟ್ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದಿನ ಅವಧಿಯಲ್ಲೂ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 9ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಇದರೊಂದಿಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲೂ ಮಳೆ

ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ಇದೆ.

ಆಗಸ್ಟ್ 9ರಂದು ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ತುಸು ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು.

ಕರಾವಳಿಯಲ್ಲಿ ಭಾರಿ ಮಳೆ ದಾಖಲು

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 7 ಸೆಂ.ಮೀ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು