ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ

Karnataka weather forecast: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚು. ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಿಗೆ ಚಂಡಮಾರುತ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ
ಮಳೆ
Follow us
ಶಾಂತಮೂರ್ತಿ
| Updated By: ವಿವೇಕ ಬಿರಾದಾರ

Updated on: Nov 30, 2024 | 9:34 AM

ಬೆಂಗಳೂರು, ನವೆಂಬರ್​ 30: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರ (ನ.30) ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು‌ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 1 ರಿಂದ ಡಿಸೆಂಬರ್‌ 3 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಫೆಂಗಾಲ್ ಚಂಡಮಾರುತವು ಪಶ್ಚಿಮ-ವಾಯುವ್ಯದ ಕಡೆಗೆ ಚಳಿಸುತ್ತಿದ್ದು ಮತ್ತು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯನ್ನು ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಪುದುಚೇರಿಗೆ ಶನಿವಾರ ಮಧ್ಯಾಹ್ನ ಭೂ ಪ್ರದೇಶ ಪ್ರವೇಶಿಸುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 70-80 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡು, ಕೇರಳ, ಆಂಧ್ರದ ಕಡಲತೀರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Cyclone Fengal: ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ, ರೆಡ್ ಅಲರ್ಟ್​

ಕಳೆದ ಎರಡು ವಾರಗಳಿಂದ ಕರ್ನಾಟಕದಲ್ಲಿ ಮೈಕೊರೆಯುವಷ್ಟು ಚಳಿತ್ತು. ಆದರೆ, ಕಳೆದ 24 ಗಂಟೆಯಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಮಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 26, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್​, ಮೈಸೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 22 ಮತ್ತು ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?