AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 17: ರಾಜ್ಯದಲ್ಲಿ ಇನ್ನೂ ವ್ಯಾಪಕ ಮಳೆಯ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಜುಲೈ 17 ಹಾಗೂ 18ರಂದು ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಜೊತೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jul 17, 2026 | 7:02 AM

Share

ಮುಖ್ಯಾಂಶಗಳು

  • ಕರಾವಳಿಯಲ್ಲಿ ಹಲವು ಕಡೆ ಸಾಧಾರಣ ಮಳೆ
  • ಒಳನಾಡಿನಲ್ಲಿ 30-40 ಕಿ.ಮೀ. ಗಾಳಿ ಸಾಧ್ಯತೆ
  • ಮಳೆ ಕೊರತೆಯಿಂದ ಗರಿಷ್ಠ ತಾಪಮಾನದಲ್ಲಿ ಹೆಚ್ಚಳ

ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲವಾಗಿರುವ ನಡುವೆಯೇ, ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಶಿಯಸ್ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ತಿಳಿಸಿದೆ. ಇಂದು (ಜುಲೈ 17) ಮತ್ತು 18ರಂದು ಕರಾವಳಿ ಕರ್ನಾಟಕ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ ಕಡಿಮೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸೀಮಿತವಾಗಿರಲಿದೆ. ಜುಲೈ 17ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಜುಲೈ 18ರಂದು ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲೂ ಬರಲ್ಲ ಮಳೆ

ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯ ನಿರೀಕ್ಷೆ ಇಲ್ಲ. ಜುಲೈ 17ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ದಾಖಲೆ ಬರೆದ ಉಷ್ಣಾಂಶ: 112 ವರ್ಷಗಳ ಬಳಿಕ ಜುಲೈನಲ್ಲಿ ಅತ್ಯಧಿಕ ತಾಪಮಾನ ದಾಖಲು

ಜುಲೈ 18ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್