AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದುವರಿದ ಚಳಿ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ದಾಖಲು

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರಿದಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ದಾವಣಗೆರೆಯಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಮುಂದುವರಿದ ಚಳಿ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ದಾಖಲು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 21, 2026 | 6:39 AM

Share

ಮುಖ್ಯಾಂಶಗಳು

  • ರಾಜ್ಯದಾದ್ಯಂತ ಮುಂದುವರಿದ ಒಣಹವೆ ಮತ್ತು ಚಳಿಯ ವಾತಾವರಣ
  • ದಾವಣಗೆರೆಯಲ್ಲಿ ಕನಿಷ್ಠ 10.3 ಡಿಗ್ರಿ ತಾಪಮಾನ ದಾಖಲು
  • ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಬಳಿಕ ತಾಪಮಾನ ಏರಿಕೆ

ಬೆಂಗಳೂರು, ನವೆಂಬರ್ 21: ಕರ್ನಾಟಕದಾದ್ಯಂತ ಒಣಹವೆ ಮುಂದುವರಿದಿದ್ದು, ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಅದರಲ್ಲೂ ದಾವಣಗೆರೆಯಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ. ಇಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಮುಂದಿನ ಎರಡು ದಿನ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ಬಳಿಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ರಾತ್ರಿ ವೇಳೆ ಹೆಚ್ಚಲಿದೆ ಚಳಿ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ. ಒಟ್ಟಾರೆ ರಾಜ್ಯದಲ್ಲಿ ಸದ್ಯಕ್ಕೆ ಮಳೆಯ ಲಕ್ಷಣಗಳಿಲ್ಲದಿದ್ದರೂ, ಬೆಳಗಿನ ಮತ್ತು ರಾತ್ರಿ ವೇಳೆ ಚಳಿಯ ಅನುಭವ ಹೆಚ್ಚಾಗುವ ಸಾಧ್ಯತೆಯಿದೆ.

ನವೆಂಬರ್ 23 ರಿಂದ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

ನವೆಂಬರ್ 23ರಂದು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ. ನವೆಂಬರ್ 24ರಿಂದ 26ರವರೆಗೆ ರಾಜ್ಯದಾದ್ಯಂತ ಒಂದೆರಡು ಕಡೆ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?