AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಮುಂದಿನ ಐದು ದಿನ ಚಳಿಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ

ಕರ್ನಾಟಕದಲ್ಲಿ ಚಳಿಯ ವಾತಾವರಣ ಈಗಿರುವ ರೀತಿಯೇ ಮುಂದುವರಿಯುವ ಮುನ್ಸೂಚನೆ ಇದ್ದು, ಮುಂದಿನ ಐದು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಕನಿಷ್ಠ 11.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕರ್ನಾಟಕ ಹವಾಮಾನ: ಮುಂದಿನ ಐದು ದಿನ ಚಳಿಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 23, 2026 | 6:52 AM

Share

ಮುಖ್ಯಾಂಶಗಳು

  • ಮುಂದಿನ ಐದು ದಿನ ಚಳಿಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ
  • ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ ದಾಖಲು
  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ

ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಚಳಿಯ ವಾತಾವರಣವೂ ಈಗಿರುವ ರೀತಿಯಲ್ಲೇ ಮುಂದುವರಿಯುವ ಮುನ್ಸೂಚನೆ ಇದೆ. ಮುಂದಿನ ಐದು ದಿನಗಳವರೆಗೆ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ (Belagavi AP) 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ ದಾಖಲಾಗಿರುವುದು ಚಳಿಯ ತೀವ್ರತೆಯನ್ನು ಸೂಚಿಸುತ್ತದೆ. ಮುಂದಿನ ಐದು ದಿನಗಳಲ್ಲಿಯೂ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಏರಿಳಿತ ಇರುವುದಿಲ್ಲ ಎಂದು ಮುನ್ಸೂಚನೆ ತಿಳಿಸಿದೆ.

ಇಂದು (ನವೆಂಬರ್ 23) ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ನವೆಂಬರ್ 24ರಂದು ಕೆಲವೆಡೆ ಮಳೆ ಸಾಧ್ಯತೆ

ನವೆಂಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಚಳಿಗೆ ದಾವಣಗೆರೆ ಗಡಗಡ, ರಾಜ್ಯದಲ್ಲೇ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲು

ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ನವೆಂಬರ್ 24 ಮತ್ತು 25ರಂದು ಒಂದೆರಡು ಕಡೆ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More