
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಚಳಿಯ ವಾತಾವರಣವೂ ಈಗಿರುವ ರೀತಿಯಲ್ಲೇ ಮುಂದುವರಿಯುವ ಮುನ್ಸೂಚನೆ ಇದೆ. ಮುಂದಿನ ಐದು ದಿನಗಳವರೆಗೆ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ (Belagavi AP) 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ ದಾಖಲಾಗಿರುವುದು ಚಳಿಯ ತೀವ್ರತೆಯನ್ನು ಸೂಚಿಸುತ್ತದೆ. ಮುಂದಿನ ಐದು ದಿನಗಳಲ್ಲಿಯೂ ಕನಿಷ್ಠ ತಾಪಮಾನದಲ್ಲಿ ಗಮನಾರ್ಹ ಏರಿಳಿತ ಇರುವುದಿಲ್ಲ ಎಂದು ಮುನ್ಸೂಚನೆ ತಿಳಿಸಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ನವೆಂಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಇದನ್ನೂ ಓದಿ: ಕರ್ನಾಟಕ ಹವಾಮಾನ: ಚಳಿಗೆ ದಾವಣಗೆರೆ ಗಡಗಡ, ರಾಜ್ಯದಲ್ಲೇ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲು
ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ನವೆಂಬರ್ 24 ಮತ್ತು 25ರಂದು ಒಂದೆರಡು ಕಡೆ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ