ಕರ್ನಾಟಕದಲ್ಲಿ ಮುಂದಿನ ಐದು ದಿನ ಚಳಿಯ ವಾತಾವರಣ: ಬೆಂಗಳೂರಿನಲ್ಲಿ ನವೆಂಬರ್ 24ರಂದು ಮಳೆ ಸಾಧ್ಯತೆ!

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೆ ಚಳಿಯ ವಾತಾವರಣ ಈಗಿರುವ ರೀತಿಯೇ ಮುಂದುವರಿಯಲಿದೆ. ಬೆಳಗಾವಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನವೆಂಬರ್ 24ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಮುಂದಿನ ಐದು ದಿನ ಚಳಿಯ ವಾತಾವರಣ: ಬೆಂಗಳೂರಿನಲ್ಲಿ ನವೆಂಬರ್ 24ರಂದು ಮಳೆ ಸಾಧ್ಯತೆ!
ಸಾಂದರ್ಭಿಕ ಚಿತ್ರ

Updated on: Nov 24, 2026 | 6:47 AM

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದಿನ ಐದು ದಿನ ಚಳಿ ಮುಂದುವರಿಕೆ
  • ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ ದಾಖಲು
  • ಬೆಂಗಳೂರಿನಲ್ಲಿ ಇಂದು ಹಗುರ ಮಳೆ ಸಾಧ್ಯತೆ

ಬೆಂಗಳೂರು, ನವೆಂಬರ್ 24: ರಾಜ್ಯದಲ್ಲಿ ಒಣ ಹವೆ ಮುಂದುವರಿದಿದ್ದು, ಚಳಿಯ ವಾತಾವರಣ ಮುಂದಿನ ದಿನಗಳಲ್ಲಿ ಈಗಿರುವಂತೆಯೇ ಮುಂದುವರಿಯುವ ಮುನ್ಸೂಚನೆ ಇದೆ. ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ಮುಂದಿನ ಐದು ದಿನಗಳವರೆಗೆ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನೊಂದೆಡೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 24 ಮತ್ತು 25ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ನವೆಂಬರ್ 24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಚಳಿಯ ನಡುವೆಯೇ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದಲ್ಲಿ ಹೇಗಿರಲಿದೆ ಹವಾಮಾನ?

ನವೆಂಬರ್ 24ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ.

Loading...

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಮುಂದಿನ ಐದು ದಿನ ಚಳಿಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ

ಒಟ್ಟಿನಲ್ಲಿ ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರಿಯಲಿದ್ದು, ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಬೆಂಗಳೂರಿನಲ್ಲಿ ನವೆಂಬರ್ 24ರಂದು ಮಳೆಯ ಮುನ್ಸೂಚನೆ ಇರುವುದರಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us