ಕರ್ನಾಟಕ ಹವಾಮಾನ ವರದಿ: ಬೀದರ್​, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ 2 ದಿನ ಶೀತ ಗಾಳಿ

|

Updated on: Jan 04, 2025 | 8:16 AM

ಕರ್ನಾಟಕದಾದ್ಯಂತ ಚಳಿಗಾಲದ ತೀವ್ರ ಅಲೆ ಆವರಿಸಿದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಅನುಭವವಾಗುತ್ತಿದ್ದು, ಬೀದರ್, ವಿಜಯಪುರ, ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ತೀವ್ರ ಶೀತ ಮತ್ತು ಮಂಜು ಆವರಿಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ತಾಪಮಾನ 15 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಹವಾಮಾನ ಇಲಾಖೆ ಜಿಲ್ಲಾವಾರು ತಾಪಮಾನದ ಮುನ್ಸೂಚನೆಯನ್ನು ನೀಡಿದೆ.

ಕರ್ನಾಟಕ ಹವಾಮಾನ ವರದಿ: ಬೀದರ್​, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ 2 ದಿನ ಶೀತ ಗಾಳಿ
ಸಾಂದರ್ಭಿಕ ಚಿತ್ರ
Follow us on

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಮೈಕೊರೆಯುವಂತಹ ಚಳಿಯಿಂದಾಗಿ ಜನರು ಬೆಳ್ಳಂ ಬೆಳಗ್ಗೆ ಮನೆಯಿಂದ ಹೊರಗೆ ಬರುತ್ತಿಲ್ಲ. ಚಳಿ ಕಾಯಿಸಿಕೊಳ್ಳುವುದು ಸರ್ವೆ ಸಾಮಾನ್ಯವಾಗಿದೆ. ಶನಿವಾರ (ಜ.04) ಸಹ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ತಣ್ಣನೆಯ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನ ಉತ್ತರ ಕರ್ನಾಟಕದ ಬೀದರ್​, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಆವರಿಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಮತ್ತು ಕನಿಷ್ಠ 16, ಬೀದರ್​ನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 13, ಕಲಬುರಗಿ ಗರಿಷ್ಠ 31 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಮಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 21, ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 15, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಮಂಡ್ಯದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16, ಮಡಿಕೇರಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 14, ರಾಮನಗರದಲ್ಲಿ ಗರಿಷ್ಠ 27 ಮತ್ತು ಕನಿಷ್ಠ 16, ಹಾಸನದಲ್ಲಿ ಗರಿಷ್ಠ 26 ಮತ್ತು ಕನಿಷ್ಠ 14, ಚಾಮರಾಜನಗರದಲ್ಲಿ ಗರಿಷ್ಠ 30 ಮತ್ತು ಕನಿಷ್ಠ 15, ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಕೋಲಾರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 13, ತುಮಕೂರಿನಲ್ಲಿ ಗರಿಷ್ಠ 26 ಮತ್ತು ಗರಿಷ್ಠ 14, ಉಡುಪಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 21, ಉತ್ತರ ಕನ್ನಡದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 21, ಚಿಕ್ಕಮಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 13, ದಾವಣಗೆರೆಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 17, ಧಾರವಾಡದಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಚಿತ್ರದುರ್ಗದಲ್ಲಿ ಗರಿಷ್ಠ 26 ಮತ್ತು ಕನಿಷ್ಠ 15, ಹಾವೇರಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಬಳ್ಳಾರಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16, ಗದಗದಲ್ಲಿ ಗರಿಷ್ಠ 27 ಮತ್ತು ಕನಿಷ್ಠ 15 ಮತ್ತು ಕೊಪ್ಪಳದಲ್ಲಿ ಗರಿಷ್ಠ 28 ಮತ್ತು 16 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿದೆ.

ರಾಯಚೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 17, ಯಾದಗಿರಿಯಲ್ಲಿ ಗರಿಷ್ಠ 30 ಮತ್ತು ಕನಿಷ್ಠ 16, ಮತ್ತು ಬಾಗಲಕೋಟೆಯಲ್ಲಿ ಗರಿಷ್ಠ 30 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ