Cyclone Fengal: ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆ
Karnataka Weather forecast: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿ ರವಿವಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರ ವರೆಗೆ ಮಳೆ ಮುಂದುವರಿಯಲಿದೆ. ಗಾಳಿಯ ವೇಗ ಗಂಟೆಗೆ 90 ಕಿಮೀ ತಲುಪಬಹುದು. ಸಮುದ್ರ ತೀರದ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶನಿವಾರದಿಂದಲೇ ತುಂತುರು ಮಳೆ ಆರಂಭವಾಗಿದೆ.
ಬೆಂಗಳೂರು, ಡಿಸೆಂಬರ್ 01: ಫೆಂಗಲ್ ಚಂಡಮಾರುತದಿಂದ (Cyclone Fengal) ಪರಿಣಾಮ ಕರ್ನಾಟಕಕ್ಕೂ ತಟ್ಟಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ರವಿವಾರ ಮಳೆಯಾಗುವ (Rain) ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಡಿಸೆಂಬರ್ 3ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. ನಂತರ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. ಫೆಂಗಲ್ ಚಂಡಮಾರುತ ಪರಿಣಾಮ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಡದೋಣಿಗಳು ಸಮುದ್ರ ತೀರದಲ್ಲಿ ಲಂಗರು ಹಾಕಿವೆ.
ಇದನ್ನೂ ಓದಿ: Cyclone Fengal: ತಮಿಳುನಾಡು ಕರಾವಳಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ಹೈ ಅಲರ್ಟ್
ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಂದ ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನ ಹೆಚ್ಎಎಲ್ನಲ್ಲಿ 2.7 ಮಿ.ಮೀ. ಮಳೆಯಾಗಿದೆ. ಉಳಿದಂತೆ ಮೆಜೆಸ್ಟಿಕ್, ವಿಧಾನಸೌಧ ಸೇರಿದಂತೆ ಹಲವೆಡೆ ಕೂಡ ತುಂತುರುಮಳೆಯಾಗಿದೆ. ಮಳೆಯಿಂದ ಬೆಂಗಳೂರು ಕೂಲ್ ಆಗಿದೆ.
ಚಂಡಮಾರುತದಿಂದ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಭಾನುವಾರವೂ ಕಚೇರಿಗೆ ಹಾಜರಾಗುವಂತೆ ಬೃಹತ್ ಬೆಂಗಳೂರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:20 am, Sun, 1 December 24