AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದತ್ತ ಮುನ್ನುಗ್ಗುತ್ತಿರುವ ಮುರಸು ಚಂಡಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಬಂಗಾಳ ಕೊಲ್ಲಿಯಲ್ಲಿ ಮುರಸು ಚಂಡಮಾರುತ ತೀವ್ರಗೊಂಡು ಆಂಧ್ರಪ್ರದೇಶದತ್ತ ಮುನ್ನುಗ್ಗುತ್ತಿದೆ. ಇದರ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಹಾಗೂ ಬಿರುಗಾಳಿ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಲ್ಲೆಲ್ಲಿ ಗುಡುಗು ಮಿಂಚಿನ ಅಬ್ಬರ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

ಆಂಧ್ರದತ್ತ ಮುನ್ನುಗ್ಗುತ್ತಿರುವ ಮುರಸು ಚಂಡಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on: Nov 03, 2026 | 6:38 AM

Share

ಮುಖ್ಯಾಂಶಗಳು

  • ಆಂಧ್ರದತ್ತ ಮುನ್ನುಗ್ಗುತ್ತಿರುವ ಮುರಸು ಚಂಡಮಾರುತ
  • ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
  • ನವೆಂಬರ್ ಐದರವರೆಗೆ ಬಿರುಗಾಳಿ, ಗುಡುಗು ಎಚ್ಚರಿಕೆ

ಬೆಂಗಳೂರು, ನವೆಂಬರ್ 3: ಬಂಗಾಳ ಕೊಲ್ಲಿಯಲ್ಲಿ ಮುರಸು ಚಂಡಮಾರುತ ತೀವ್ರಗೊಂಡಿದ್ದು, ಆಂಧ್ರಪ್ರದೇಶದತ್ತ ಮುನ್ನುಗ್ಗುತ್ತಿದೆ. ಇದರ ಪರಿಣಾಮ ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ನವೆಂಬರ್ 3) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಆಂಧ್ರಪ್ರದೇಶ ಮತ್ತು ಒಡಿಶಾ ಭಾಗಗಳಲ್ಲಿ ಅರ್ನಾಬ್ ಚಂಡಮಾರುತದ ಪರಿಣಾಮ ತೀವ್ರ ಹಾನಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಮುರಸು ಚಂಡಮಾರುತದ ಆತಂಕ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ತೀವ್ರಗೊಂಡಿರುವ ಚಂಡಮಾರುತ ಆಂಧ್ರಪ್ರದೇಶದತ್ತ ಸಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿ ಭಾಗದಲ್ಲಿ ಚಂಡಮಾರುತ ಪ್ರವೇಶಿಸುವ ಸಾಧ್ಯತೆಯಿದೆ. ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ವಾಯುಭಾರ ಕುಸಿತದ ಎಫೆಕ್ಟ್

ಆಂಧ್ರಪ್ರದೇಶ, ತಮಿಳುನಾಡು, ರಾಯಲಸೀಮಾ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹಲವು ಪ್ರದೇಶಗಳಲ್ಲಿ ಮಳೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ನವೆಂಬರ್ 5ರವರೆಗೆ ಗುಡುಗು, ಬಿರುಗಾಳಿ ಮುನ್ಸೂಚನೆ

ನವೆಂಬರ್ 2ರಿಂದ 5ರವರೆಗೆ ಕರ್ನಾಟಕದ ಒಳನಾಡಿನ ಹಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ನವೆಂಬರ್ 1ರಿಂದ 5ರವರೆಗೆ ಕರಾವಳಿ ಭಾಗದ ಪ್ರತ್ಯೇಕ ಸ್ಥಳಗಳಲ್ಲಿ ಸಿಡಿಲು ಸಹಿತ ಗುಡುಗು ಉಂಟಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: ಮುರಸು ಚಂಡಮಾರುತದ ಅಬ್ಬರ; ಚೆನ್ನೈನಲ್ಲಿ 20ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದು, ಸಮುದ್ರ ತೀರದಲ್ಲಿ ಹೈ ಅಲರ್ಟ್

ಸೋಮವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಕೆಲವೆಡೆ ಹಾಗೂ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 2 ಸೆಂ.ಮೀ, ಬಂಟ್ವಾಳ, ಸುಬ್ರಹ್ಮಣ್ಯ ಮತ್ತು ಪುತ್ತೂರು ಎಚ್‌ಎಂಎಸ್‌ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನು ರಾಜ್ಯದ ಬಯಲುಸೀಮೆಯಲ್ಲಿ ಮಂಡ್ಯ ಎಡಬ್ಲ್ಯೂಎಸ್‌ನಲ್ಲಿ ಕನಿಷ್ಠ 18.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾತ್ರಿಕರ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ
ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾತ್ರಿಕರ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ
ಜನಾಕ್ರೋಶ ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತ ಸರ್ಕಾರ, ಮೊಸರಿನ ದರ ಇಳಿಕೆ
ಜನಾಕ್ರೋಶ ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತ ಸರ್ಕಾರ, ಮೊಸರಿನ ದರ ಇಳಿಕೆ
ರಾಜ್ಯದ ಬೆಲೆ ಏರಿಕೆ, ಆರ್ಥಿಕ ನಿರ್ಧಾರಗಳ ಬಗ್ಗೆ ಡಿಕೆಶಿ ಹೇಳಿದ್ದೇನು?
ರಾಜ್ಯದ ಬೆಲೆ ಏರಿಕೆ, ಆರ್ಥಿಕ ನಿರ್ಧಾರಗಳ ಬಗ್ಗೆ ಡಿಕೆಶಿ ಹೇಳಿದ್ದೇನು?
ಖಾಸಗಿ ಕೆಲಸ ಬಿಟ್ಟು ಬಂದ ಶಿಕ್ಷಕರಿಗೆ 15 ತಿಂಗಳಿಂದ ಸಂಬಳ ನೀಡದ ಸರ್ಕಾರ
ಖಾಸಗಿ ಕೆಲಸ ಬಿಟ್ಟು ಬಂದ ಶಿಕ್ಷಕರಿಗೆ 15 ತಿಂಗಳಿಂದ ಸಂಬಳ ನೀಡದ ಸರ್ಕಾರ
ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಜೂಪಲ್ಲಿ ರಾಮೇಶ್ವರ ರಾವ್
ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಜೂಪಲ್ಲಿ ರಾಮೇಶ್ವರ ರಾವ್
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್