AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ರಾಜ್ಯಾದ್ಯಂತ ಒಣ ಹವೆ-ಚಳಿ ಶುರು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿಗೆ ಕುಸಿತ

ಕರ್ನಾಟಕ ಹವಾಮಾನ ಮುನ್ಸೂಚನೆ ಅಕ್ಟೋಬರ್ 29: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 29 ಮತ್ತು 30ರಂದು ಒಣ ಹವಾಮಾನ ಮುಂದುವರಿಯಲಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, ಚಳಿ ಹೆಚ್ಚಾಗಿದೆ. ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ದಾಖಲಾಗಿದೆ.

ಕರ್ನಾಟಕ ಹವಾಮಾನ: ರಾಜ್ಯಾದ್ಯಂತ ಒಣ ಹವೆ-ಚಳಿ ಶುರು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿಗೆ ಕುಸಿತ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 29, 2026 | 6:39 AM

Share

ಮುಖ್ಯಾಂಶಗಳು

  • ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿಗೆ ಕುಸಿತ
  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಕೆ
  • ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ದಾಖಲು

ಬೆಂಗಳೂರು, ಅಕ್ಟೋಬರ್ 29: ರಾಜ್ಯದಲ್ಲಿ ಸದ್ಯ ಒಣ ಹವಾಮಾನ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಚಳಿಯ ಅನುಭವ ಹೆಚ್ಚಾಗಿದೆ. ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯುವ ಮುನ್ಸೂಚನೆ ಇದೆ. ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದೆ.

ರಾಜ್ಯದಲ್ಲಿ ದಾಖಲಾದ ಹವಾಮಾನ ಮಾಹಿತಿಯ ಪ್ರಕಾರ, ದಾವಣಗೆರೆ ಬಯಲು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮತ್ತೊಂದೆಡೆ, ಉತ್ತರ ಕನ್ನಡದ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾದ ಪ್ರದೇಶವಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ

ಅಕ್ಟೋಬರ್ 29ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಚಿಕ್ಕಬಳ್ಳಾಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವಾಮಾನ ಇರಲಿದೆ. ರಾತ್ರಿ ವೇಳೆ ಚಳಿಯ ವಾತಾವರಣ ಇರಲಿದೆ.

ಅಕ್ಟೋಬರ್ 30ರಂದೂ ಒಣ ಹವೆ

ಅಕ್ಟೋಬರ್ 30ರಂದು ಕೂಡ ರಾಜ್ಯದ ಮೂರು ಹವಾಮಾನ ವಿಭಾಗಗಳ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿಲ್ಲ.

LIVE TV

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇದೇ ರೀತಿಯ ಹವಾಮಾನ ಇರಲಿದೆ. ಸದ್ಯ ರಾಜ್ಯದಲ್ಲಿ ಒಣ ಹವಾಮಾನ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ಕುಸಿತದಿಂದ ಚಳಿಯ ಅನುಭವ ಹೆಚ್ಚಾಗಿರುವುದು ಗಮನಾರ್ಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More