
ಬೆಂಗಳೂರು, ಅಕ್ಟೋಬರ್ 29: ರಾಜ್ಯದಲ್ಲಿ ಸದ್ಯ ಒಣ ಹವಾಮಾನ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಚಳಿಯ ಅನುಭವ ಹೆಚ್ಚಾಗಿದೆ. ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯುವ ಮುನ್ಸೂಚನೆ ಇದೆ. ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದೆ.
ರಾಜ್ಯದಲ್ಲಿ ದಾಖಲಾದ ಹವಾಮಾನ ಮಾಹಿತಿಯ ಪ್ರಕಾರ, ದಾವಣಗೆರೆ ಬಯಲು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮತ್ತೊಂದೆಡೆ, ಉತ್ತರ ಕನ್ನಡದ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾದ ಪ್ರದೇಶವಾಗಿದೆ.
ಅಕ್ಟೋಬರ್ 29ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಚಿಕ್ಕಬಳ್ಳಾಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವಾಮಾನ ಇರಲಿದೆ. ರಾತ್ರಿ ವೇಳೆ ಚಳಿಯ ವಾತಾವರಣ ಇರಲಿದೆ.
ಅಕ್ಟೋಬರ್ 30ರಂದು ಕೂಡ ರಾಜ್ಯದ ಮೂರು ಹವಾಮಾನ ವಿಭಾಗಗಳ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿಲ್ಲ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇದೇ ರೀತಿಯ ಹವಾಮಾನ ಇರಲಿದೆ. ಸದ್ಯ ರಾಜ್ಯದಲ್ಲಿ ಒಣ ಹವಾಮಾನ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ಕುಸಿತದಿಂದ ಚಳಿಯ ಅನುಭವ ಹೆಚ್ಚಾಗಿರುವುದು ಗಮನಾರ್ಹವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ