AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಚಳಿಗೆ ದಾವಣಗೆರೆ ಗಡಗಡ, ರಾಜ್ಯದಲ್ಲೇ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲು

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದಲ್ಲಿ ಚಳಿಯ ಅಬ್ಬರ ಮುಂದುವರಿದಿದ್ದು, ದಾವಣಗೆರೆ ಗಡಗಡ ನಡುಗಿದೆ. ರಾಜ್ಯದ ಬಯಲು ಪ್ರದೇಶಗಳಲ್ಲೇ ದಾವಣಗೆರೆಯಲ್ಲಿ ಅತ್ಯಂತ ಕಡಿಮೆ 8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನಗಳ ಕಾಲ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ: ಚಳಿಗೆ ದಾವಣಗೆರೆ ಗಡಗಡ, ರಾಜ್ಯದಲ್ಲೇ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲು
ಬೆಂಗಳೂರಿನ ಅಂಜನಾಪುರ ಬಳಿ ಭಾನುವಾರ ಬೆಳಗ್ಗೆ ಕಂಡುಬಂದ ತುಸು ಮಂಜಿನಿಂದ ಕೂಡಿದ ವಾತಾವರಣ
ಗಣಪತಿ ಶರ್ಮಾ
|

Updated on: Nov 22, 2026 | 6:29 AM

Share

ಮುಖ್ಯಾಂಶಗಳು

  • ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲು
  • ರಾಜ್ಯದಾದ್ಯಂತ ಮುಂದುವರಿದ ಒಣಹವೆ ಮತ್ತು ಚಳಿ
  • ಎರಡು ದಿನಗಳ ಬಳಿಕ ಕನಿಷ್ಠ ತಾಪಮಾನ ಮತ್ತೂ ಇಳಿಕೆ

ಬೆಂಗಳೂರು, ನವೆಂಬರ್ 22: ಕರ್ನಾಟಕದಲ್ಲಿ ಚಳಿಯ ಅಬ್ಬರ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ರಾಜ್ಯದ ಬಯಲು ಪ್ರದೇಶಗಳಲ್ಲೇ ದಾವಣಗೆರೆ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಿಸಿದೆ. ಬೆಳಗಿನ ಜಾವ ಚಳಿಯ ತೀವ್ರತೆ ಹೆಚ್ಚಾಗಿದ್ದು, ಜನರು ಬೆಚ್ಚನೆಯ ಉಡುಪುಗಳ ಮೊರೆ ಹೋಗುವಂತಾಗಿದೆ. ಜತೆಗೆ, ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಆ ಬಳಿಕ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.

ನವೆಂಬರ್ 23ರಿಂದ ಕೆಲವೆಡೆ ಮಳೆ ಸಾಧ್ಯತೆ

ನವೆಂಬರ್ 23ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 24ರಿಂದ 27ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More