AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಚಳಿಗೆ ನಡುಗಿದ ದಾವಣಗೆರೆ, ರಾಜ್ಯಾದ್ಯಂದ ಒಣಹವೆ, ಚಳಿ ಮುನ್ಸೂಚನೆ

ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ದಾವಣಗೆರೆಯಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಹಾಗೂ ಚಳಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಹವಾಮಾನ: ಚಳಿಗೆ ನಡುಗಿದ ದಾವಣಗೆರೆ, ರಾಜ್ಯಾದ್ಯಂದ ಒಣಹವೆ, ಚಳಿ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 13, 2026 | 7:16 AM

Share

ಮುಖ್ಯಾಂಶಗಳು

  • ದಾವಣಗೆರೆಯಲ್ಲಿ 10.3 ಡಿಗ್ರಿ ಕನಿಷ್ಠ ತಾಪಮಾನ ದಾಖಲು
  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ
  • ನವೆಂಬರ್ 14ಕ್ಕೂ ಒಣಹವೆ ಮುನ್ಸೂಚನೆ

ಬೆಂಗಳೂರು, ನವೆಂಬರ್ 13: ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಕಂಡುಬರುತ್ತಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ನಗರ, ದಕ್ಷಿಣ ಒಳನಾಡಿನಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇನ್ನೆರಡು ದಿನ ಒಣ ಹವೆ, ಚಳಿಯ ವಾತಾವರಣ: ಧಾರವಾಡದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ

ನವೆಂಬರ್ 14ರಂದೂ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇದೇ ರೀತಿಯ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಮಳೆ ಇಲ್ಲದ ವಾತಾವರಣದ ನಡುವೆ ಚಳಿ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ