ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ನ.20ರಂದು ಕರಾವಳಿ ಸೇರಿ ಹಲವೆಡೆ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ಸದ್ಯ ಒಣಹವೆ ಮುಂದುವರಿದಿದ್ದು, ಚಳಿಯ ವಾತಾವರಣ ಇದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನವೆಂಬರ್ 20ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ನ.20ರಂದು ಕರಾವಳಿ ಸೇರಿ ಹಲವೆಡೆ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ

Updated on: Nov 17, 2026 | 6:48 AM

ಮುಖ್ಯಾಂಶಗಳು

  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ, ಚಳಿ ಮುಂದುವರಿಕೆ
  • ನವೆಂಬರ್ 20ರಂದು ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
  • ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13.8 ಡಿಗ್ರಿ ದಾಖಲು

ಬೆಂಗಳೂರು, ನವೆಂಬರ್ 17: ರಾಜ್ಯದಲ್ಲಿ ಸದ್ಯ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಸದ್ಯಕ್ಕೆ ಯಾವ ಜಿಲ್ಲೆಗೂ ಮಳೆಯ ಮುನ್ಸೂಚನೆ ಇಲ್ಲ. ಆದರೆ ನವೆಂಬರ್ 20ರಂದು ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು. ಉತ್ತರ ಒಳನಾಡಿನ ಗದಗ, ಕೊಪ್ಪಳ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Loading...

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿದಂತೆ ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ ಇಳಿಕೆ ಸಾಧ್ಯತೆ

ಇನ್ನು ರಾಜ್ಯದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಯಲು ಸೀಮೆ ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us