Karnataka Weather Forecast: ಕರ್ನಾಟಕದಲ್ಲಿ ಮಳೆ ಇಳಿಮುಖ, ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ

ಕರ್ನಾಟಕದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಅಕ್ಟೋಬರ್ 27 ಮತ್ತು 28ರಂದು ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

Karnataka Weather Forecast: ಕರ್ನಾಟಕದಲ್ಲಿ ಮಳೆ ಇಳಿಮುಖ, ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ
ಸಾಂದರ್ಭಿಕ ಚಿತ್ರ

Updated on: Oct 27, 2026 | 6:49 AM

ಮುಖ್ಯಾಂಶಗಳು

  • ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ
  • ಕೆಲವೆಡೆ ಮಾತ್ರ ಹಗುರ ಮಳೆ ಸಾಧ್ಯತೆ
  • ಉತ್ತರ ಒಳನಾಡಿನಲ್ಲಿ ಗಂಟೆಗೆ 30–40 ಕಿ.ಮೀ. ಗಾಳಿ

ಬೆಂಗಳೂರು, ಅಕ್ಟೋಬರ್ 27: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಅಕ್ಟೋಬರ್ 27 ಮತ್ತು 28ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ. ಕೆಲವೇ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಅಕ್ಟೋಬರ್ 27ರಂದು ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ

ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಚಿಕ್ಕಬಳ್ಳಾಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 28ರಂದು ಕೆಲವೆಡೆ ಹಗುರ ಮಳೆ

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಬಳ್ಳಾರಿ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ವಿಜಯನಗರ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣ ಹವೆಯೊಂದಿಗೆ ಇದೇ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.

ಚಿಂತಾಮಣಿಯಲ್ಲಿ 2 ಸೆಂ.ಮೀ. ಮಳೆ ದಾಖಲು

ಸೋಮವಾರ ಸಂಜೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಳೆ ಮಾಪನ ಕೇಂದ್ರದಲ್ಲಿ 2 ಸೆಂ.ಮೀ. ಮಳೆಯಾಗಿದ್ದರೆ, ಚಾಮರಾಜನಗರ ಜಿಲ್ಲೆಯ ಬಂಡೀಪುರ ಮತ್ತು ಚಾಮರಾಜನಗರದಲ್ಲಿ ತಲಾ 1 ಸೆಂ.ಮೀ. ಮಳೆ ದಾಖಲಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.

ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮುಂದಿನ ಎರಡು ದಿನಗಳಲ್ಲಿಯೂ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಕೆಲವೆಡೆ ಹಗುರ ಮಳೆ ಹಾಗೂ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us