AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2 ದಿನ ಮಿಶ್ರ ಹವಾಮಾನ: ಕರಾವಳಿ ಸೇರಿ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಇತರ ಕಡೆಗಳಲ್ಲಿ ಚಳಿ

ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ಅಕ್ಟೋಬರ್ 30 ಮತ್ತು 31ರಂದು ಮಿಶ್ರ ಹವಾಮಾನ ಇರಲಿದೆ. ಅಕ್ಟೋಬರ್ 30ರಂದು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಉತ್ತರ ಒಳನಾಡಿನ ನಾಲ್ಕು ಹಾಗೂ ದಕ್ಷಿಣ ಒಳನಾಡಿನ ಮೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 31ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದಲ್ಲಿ 2 ದಿನ ಮಿಶ್ರ ಹವಾಮಾನ: ಕರಾವಳಿ ಸೇರಿ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಇತರ ಕಡೆಗಳಲ್ಲಿ ಚಳಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 30, 2026 | 6:43 AM

Share

ಮುಖ್ಯಾಂಶಗಳು

  • ಅಕ್ಟೋಬರ್ 31ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
  • ಕರಾವಳಿ, ಮಲೆನಾಡಿನ ಕೆಲವೆಡೆ ಹಗುರ ಮಳೆ
  • ಇತರ ಕಡೆಗಳಲ್ಲಿ ಚಳಿ ಮುಂದುವರಿಕೆ

ಬೆಂಗಳೂರು, ಅಕ್ಟೋಬರ್ 30: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಿಶ್ರ ಹವಾಮಾನ ಇರಲಿದೆ. ಅಕ್ಟೋಬರ್ 30ರಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಅಕ್ಟೋಬರ್ 31ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ.

ಅಕ್ಟೋಬರ್ 30ರಂದು ಒಣಹವೆ

ಅಕ್ಟೋಬರ್ 30ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಅಕ್ಟೋಬರ್ 31ರಂದು ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ

ಅಕ್ಟೋಬರ್ 31ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

LIVE TV

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು, ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಭಾರಿ ಮಳೆಯ ಮುನ್ಸೂಚನೆ ಇಲ್ಲ

ಹವಾಮಾನ ಇಲಾಖೆಯ ವರದಿ ಪ್ರಕಾರ, ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಉಳಿದ ಭಾಗಗಳಲ್ಲಿ ಒಣಹವೆ ಇತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಭಾರಿ ಮಳೆಯಾಗಿರುವ ವರದಿಯಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಜಿಮ್ ಟ್ರೈನರ್ ಜೊತೆ ಪತಿಯ ಕೊಲೆ ಮಾಡಿದ ಪತ್ನಿ; ಸಿಸಿಟಿವಿ ವಿಡಿಯೋ ನೋಡಿ
ಜಿಮ್ ಟ್ರೈನರ್ ಜೊತೆ ಪತಿಯ ಕೊಲೆ ಮಾಡಿದ ಪತ್ನಿ; ಸಿಸಿಟಿವಿ ವಿಡಿಯೋ ನೋಡಿ
ಹೆಸರು ದುರ್ಬಳಕೆ, ನಂಬಿಕೆ ದ್ರೋಹ: ಧನ್ವೀರ್ ಮೇಲೆ ಕೇಸ್ ಜಡಿದ ದರ್ಶನ್
ಹೆಸರು ದುರ್ಬಳಕೆ, ನಂಬಿಕೆ ದ್ರೋಹ: ಧನ್ವೀರ್ ಮೇಲೆ ಕೇಸ್ ಜಡಿದ ದರ್ಶನ್
ಮೀರಿದ ರೈತರ ತಾಳ್ಮೆ: ಮತ್ತೊಂದು ಹಂತಕ್ಕೆ ಕಬ್ಬು ಬೆಳೆಗಾರರ ಹೋರಾಟ
ಮೀರಿದ ರೈತರ ತಾಳ್ಮೆ: ಮತ್ತೊಂದು ಹಂತಕ್ಕೆ ಕಬ್ಬು ಬೆಳೆಗಾರರ ಹೋರಾಟ
ನಂದಿನಿ ಹಾಲಿನ ಬೆಲೆ ಹೆಚ್ಚಳ ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್​​
ನಂದಿನಿ ಹಾಲಿನ ಬೆಲೆ ಹೆಚ್ಚಳ ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್​​
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ
ಹೆಣ್ಮಕ್ಕಳ ಬಗ್ಗೆ ತೂಕವಾಗಿ ಮಾತಾಡಬೇಕು: ವಿವಾದಕ್ಕೆ ಪ್ರೇಮ್ ಪ್ರತಿಕ್ರಿಯೆ