
ಬೆಂಗಳೂರು, ಅಕ್ಟೋಬರ್ 30: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಿಶ್ರ ಹವಾಮಾನ ಇರಲಿದೆ. ಅಕ್ಟೋಬರ್ 30ರಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಅಕ್ಟೋಬರ್ 31ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ತಿಳಿಸಿದೆ.
ಅಕ್ಟೋಬರ್ 30ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಅಕ್ಟೋಬರ್ 31ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು, ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ, ಗುರುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಉಳಿದ ಭಾಗಗಳಲ್ಲಿ ಒಣಹವೆ ಇತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಭಾರಿ ಮಳೆಯಾಗಿರುವ ವರದಿಯಾಗಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ