
ಬೆಂಗಳೂರು, ನವೆಂಬರ್ 12: ಕರ್ನಾಟಕದಲ್ಲಿ ನವೆಂಬರ್ 12 ಮತ್ತು 13ರಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣ ಹವಾಮಾನವೇ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡೂ ದಿನ ಒಣ ಹವಾಮಾನ ಮುಂದುವರಿಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದು, ಒಣ ಹವಾಮಾನ ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ನವೆಂಬರ್ 12 ಮತ್ತು 13ರಂದು ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ರಾತ್ರಿ ವೇಳೆ ಚಳಿಯ ಅನುಭವವಾಗಲಿದೆ.
ರಾಜ್ಯದಲ್ಲಿ ಈಗಾಗಲೇ ಒಣ ಹವಾಮಾನ ದಾಖಲಾಗಿದ್ದು, ಎಲ್ಲಿಯೂ ಮಳೆಯ ಎಚ್ಚರಿಕೆ ನೀಡಲಾಗಿಲ್ಲ. ಭಾರೀ ಮಳೆಯ ಎಚ್ಚರಿಕೆಯೂ ಇಲ್ಲ. ಇದೇ ವೇಳೆ, ರಾಜ್ಯದ ಬಯಲು ಪ್ರದೇಶಗಳ ಪೈಕಿ ಧಾರವಾಡದಲ್ಲಿ ಕನಿಷ್ಠ 12.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ