AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಮುಂದಿನ ಎರಡು ದಿನ ತಾಪಮಾನದಲ್ಲಿ ಇಳಿಕೆ ಸಾಧ್ಯತೆ, ರಾಜ್ಯಾದ್ಯಂತ ಒಣಹವೆ

ಕರ್ನಾಟಕದಾದ್ಯಂತ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕನಿಷ್ಠ ತಾಪಮಾನದಲ್ಲೂ ಇಳಿಕೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಬಂಗಾಳ ಕೊಲ್ಲಿಯಲ್ಲಿ ದಿಕ್ಕು ಬದಲಿಸಿರುವ ಅಕ್ವಾನ್ ಚಂಡಮಾರುತದಿಂದ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ: ಮುಂದಿನ ಎರಡು ದಿನ ತಾಪಮಾನದಲ್ಲಿ ಇಳಿಕೆ ಸಾಧ್ಯತೆ, ರಾಜ್ಯಾದ್ಯಂತ ಒಣಹವೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 19, 2026 | 7:11 AM

Share

ಬೆಂಗಳೂರು, ನವೆಂಬರ್ 19: ರಾಜ್ಯದಲ್ಲಿ ಸದ್ಯ ಒಣಹವೆ ಮುಂದುವರಿದಿದ್ದು, ಮುಂದಿನ ಎರಡು ದಿನಗಳಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಕನಿಷ್ಠ ತಾಪಮಾನದಲ್ಲಿ ಮುಂದಿನ ಎರಡು ದಿನ ಇಳಿಕೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇಲ್ಲ.

ಬೆಂಗಳೂರಿನಲ್ಲೂ ಒಣ ಹವೆ, ಚಳಿ

ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಬಯಲು ಪ್ರದೇಶಗಳ ಪೈಕಿ ದಾವಣಗೆರೆಯಲ್ಲಿ 12.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಅಕ್ವಾನ್​​ ಚಂಡಮಾರುತ: ಆಂಧ್ರ, ಒಡಿಶಾ ಕರಾವಳಿಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಬಂಗಾಳ ಕೊಲ್ಲಿಯಲ್ಲಿ ಮುಂದುವರಿದಿರುವ ಅಕ್ವಾನ್ ಚಂಡಮಾರುತ ದಿಕ್ಕು ಬದಲಿಸಿ ಒಡಿಶಾ ಕರಾವಳಿಯತ್ತ ಸಾಗುತ್ತಿದೆ. ಈ ಹಿಂದೆ ಆಂಧ್ರಪ್ರದೇಶದತ್ತ ಸಾಗುತ್ತಿದ್ದ ಚಂಡಮಾರುತ ದಿಕ್ಕು ಬದಲಿಸಿರುವುದರಿಂದ ಆಂಧ್ರಕ್ಕೆ ಕೊಂಚ ನಿರಾಳತೆ ಸಿಕ್ಕಿದೆ. ಆದರೆ, ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಅಕ್ವಾನ್ ಯಾರು? ಪರ್ಷಿಯನ್ ಮಹಾಕಾವ್ಯದ ದೈತ್ಯನ ಹೆಸರನ್ನು ಚಂಡಮಾರುತಕ್ಕೆ ಇಟ್ಟಿದ್ದೇಕೆ?

ಚಂಡಮಾರುತದ ಪರಿಣಾಮವಾಗಿ ಗಂಟೆಗೆ 120ರಿಂದ 145 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರದಲ್ಲಿ ಬೃಹತ್ ಅಲೆಗಳು ಏಳುವ ಮುನ್ಸೂಚನೆ ಇದೆ. ಹೀಗಾಗಿ ಸಮುದ್ರ ತೀರಕ್ಕೆ ತೆರಳದಂತೆ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಎರಡೂ ರಾಜ್ಯಗಳ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ (IMD) ಸೂಚಿಸಿದೆ. ಸದ್ಯಕ್ಕೆ ಕರ್ನಾಟಕದ ಮೇಲೆ ಚಂಡಮಾರುತದ ನೇರ ಪ್ರಭಾವ ಇಲ್ಲವಾದರೂ ಮುಂದಿನ ಒಂದೆರಡು ದಿನಗಳಲ್ಲಿ ವಾತಾವರಣದಲ್ಲಿ ತುಸು ಬದಲಾವಣೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಎಲ್ಲರ ಎದುರು ಪ್ರಿಯಾಂಕಾ ಉಪೇಂದ್ರಗೆ ಕ್ಷಮೆ ಕೇಳಿದ ನಿರ್ದೇಶಕ ಪುರುಷೋತ್ತಮ್
ಎಲ್ಲರ ಎದುರು ಪ್ರಿಯಾಂಕಾ ಉಪೇಂದ್ರಗೆ ಕ್ಷಮೆ ಕೇಳಿದ ನಿರ್ದೇಶಕ ಪುರುಷೋತ್ತಮ್
ಮೊದಲ ಬಾರಿ ಒಟ್ಟಿಗೆ ಕಾಣಿಸಿಕೊಂಡ ಟ್ರಂಪ್, ಪುಟಿನ್, ಕ್ಸಿ ಜಿನ್‌ಪಿಂಗ್
ಮೊದಲ ಬಾರಿ ಒಟ್ಟಿಗೆ ಕಾಣಿಸಿಕೊಂಡ ಟ್ರಂಪ್, ಪುಟಿನ್, ಕ್ಸಿ ಜಿನ್‌ಪಿಂಗ್
ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್: ಸೀಮಂತ್ ಕುಮಾರ್
ಬೆಂಗಳೂರಿಗೆ ನಾನೇ ಲಾಸ್ಟ್ ಅನ್ ಡಿವೈಡೆಡ್ ಪೊಲೀಸ್ ಕಮಿಷನರ್: ಸೀಮಂತ್ ಕುಮಾರ್
‘ಆಯುಷ್’ ಸಿನಿಮಾ ವಿವಾದ ಬಗೆಹರಿದಿದ್ದು ಹೇಗೆ? ವಿವರಿಸಿದ ಜಯಮಾಲಾ
‘ಆಯುಷ್’ ಸಿನಿಮಾ ವಿವಾದ ಬಗೆಹರಿದಿದ್ದು ಹೇಗೆ? ವಿವರಿಸಿದ ಜಯಮಾಲಾ
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
ಆಸಿಯಾ ಮೇಲೆ ಹಲ್ಲೆಗೆ ರೆಡಿಯಾದ ಸೌಂದರ್ಯಾ: ವಿಡಿಯೋ
ಆಸಿಯಾ ಮೇಲೆ ಹಲ್ಲೆಗೆ ರೆಡಿಯಾದ ಸೌಂದರ್ಯಾ: ವಿಡಿಯೋ
‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು
‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ದೇವರನ್ನು ಪೂಜಿಸಲ್ಲ,ಹಾಗಂತ ದೇವರಿಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ
ದೇವರನ್ನು ಪೂಜಿಸಲ್ಲ,ಹಾಗಂತ ದೇವರಿಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ