Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ ಮತ್ತು ಹವಾಮಾನ ಬದಲಾವಣೆಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ
ಮಳೆ
Follow us
ವಿವೇಕ ಬಿರಾದಾರ
|

Updated on: Oct 29, 2024 | 7:27 AM

ಕರ್ನಾಟಕದ (Karnataka) ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ (Rain) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು, ದಕ್ಷಿಣ ಒಳನಾಡು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆಯಗಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 03ರವರೆಗೆ ಸಾಧಾರಣ ಮಳೆ, ನಂತರ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 28 ರಿಂದ ನವೆಂಬರ್ 05 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಂಭವವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 03 ರವರೆಗೆ ಸಾಧಾರಣ ಮಳೆ, ಉಳಿದ ದಿನಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 27ರ ಬೆಳಗ್ಗೆ 8.30 ರಿಂದ ಅಕ್ಟೋಬರ್ 28ರ ಬೆಳಗ್ಗೆ 8.30 ರವರೆಗೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ಎಂಬಲ್ಲಿ ಅತ್ಯಧಿಕ 35ಮಿಮೀ ಮಳೆಯಾಗಿದೆ.

ಬೆಂಗಳೂರಿನಲ್ಲಿ ಹೆಚ್ಚಾದ ಚಳಿ

ಹಿಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಚಳಿಯ ವಾತವರಣ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕನಿಷ್ಟ ತಾಪಮಾನ ಇಳಿಯಾಗಿದ್ದು, ಬೆಳಗ್ಗೆ 10 ಗಂಟೆಯವರೆಗೂ ಚಳಿಯ ವಾತಾವರಣವಿದೆ.‌ ಬೆಳಗ್ಗೆ 5 ಗಂಟೆಯಿಂದ ಚಳಿ ಶುರುವಾಗುತ್ತಿದ್ದು, ಈ ವರ್ಷ ಚಳಿಯ ಪ್ರಮಾಣ ದಾಖಾಲೆ ಬರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗರಿಷ್ಠ-ಕನಿಷ್ಠ ಉಷ್ಣಾಂಶಗಳು

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ವಿಜಯಪುರದಲ್ಲಿ ಕನಿಷ್ಠ ತಾಪಮಾನ 16.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ತಾಪಮಾನ ಇಳಿಕೆಯಾಗಿದೆ. ಚಳಿಗಾಲ ಆರಂಭಕ್ಕೆ ಇನ್ನು ಒಂದು ತಿಂಗಳು ಬಾಕಿ ಇದೆ. ಆದರೆ ಸೈಕ್ಲೋನ್ ಎಫೆಕ್ಟ್​ನಿಂದಾಗಿ ಚಳಿಯ ಅನುಭವವಾಗುತ್ತಿದೆ.

ಹವಮಾನ ವೈಪರಿತ್ಯದಿಂದ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರಲಿದ್ದು, ಮಕ್ಕಳಲ್ಲಿ ಜ್ವರ, ಕೆಮ್ಮು, ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಹವಾಮಾನ ದಿಢೀರ್ ಬದಲಾವಣೆಯಿಂದಾಗಿ ಅಸ್ತಮ, ಹೃದಯ ಸಮಸ್ಯೆ ಇದ್ದವರು ಜಾಗೃತವಾಗಿ ಇರಬೇಕು ಎಂದು ವೈದ್ಯರು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ