Karnataka Weather: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡಿನಲ್ಲಿ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ

ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡಿನಲ್ಲಿ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ
Image Credit source: Hindustan Times
Follow us
|

Updated on:Apr 30, 2024 | 8:21 AM

ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣಅಲೆ(Heat Wave) ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ,ವಿಜಯಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ ಐದು ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಇಂದಿನಿಂದ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 40.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 am, Tue, 30 April 24