Karnataka Weather: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 07ರಿಂದ 12ರವರೆಗೆ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ07 ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 07ರಿಂದ 12ರವರೆಗೆ ಮಳೆ
ಮಳೆ
Image Credit source: Skymet Weather

Updated on: May 06, 2024 | 7:34 AM

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.

ಬೀದರ್​, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಅಥವಾ ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 42.0 ಡಿಗ್ರಿ ಸೆಲ್ಸಿಯಸ್​ ಗರಿಷಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 42.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 43.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us