ಕರ್ನಾಟಕ ಹವಾಮಾನ ಮುನ್ಸೂಚನೆ: 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಬೆಂಗಳೂರಿಗೂ ಮಳೆ ಮುನ್ಸೂಚನೆ
ಇಂದು (ಅಕ್ಟೋಬರ್ 9) ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9 ಮತ್ತು 10ರಂದು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಮುಖ್ಯಾಂಶಗಳು
- ಐದು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
- ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
- ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆ
ಬೆಂಗಳೂರು, ಅಕ್ಟೋಬರ್ 9: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇಂದು (ಅಕ್ಟೋಬರ್ 9) ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9 ಮತ್ತು 10ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.
ಇಂದು ಯಾವ ಜಿಲ್ಲೆಗಳಲ್ಲಿ ಮಳೆ?
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.
ಉತ್ತರ ಒಳನಾಡಿನಲ್ಲಿ ಒಣಹವೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಅ.10ರಂದು ಯಾವ ಜಿಲ್ಲೆಗಳಲ್ಲಿ ಮಳೆ?
ಅಕ್ಟೋಬರ್ 10ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕೆಲವು ಕಡೆ ಮಳೆಯಾಗಬಹುದು.
ಇದನ್ನೂ ಓದಿ: ಅಕ್ಟೋಬರ್ 10ರ ವರೆಗೂ ಕರಾವಳಿಯಲ್ಲಿ ಮಳೆ; ನಾಳೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.
ಕರಾವಳಿಯಲ್ಲಿ 3 ಸೆಂ.ಮೀ ಮಳೆ ದಾಖಲು
ಗುರುವಾರ ಸಂಜೆಗೆ ಕೊನೆಗೊಂಡಂತೆ ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಕರ್ನಾಟಕದ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಭಾರಿ ಮಳೆ ಎಲ್ಲೂ ದಾಖಲಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಬಂಟ್ವಾಳ, ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮತ್ತು ತುಮಕೂರು ಜಿಲ್ಲೆಯ ಶಿರಾದಲ್ಲಿ ತಲಾ 2 ಸೆಂ.ಮೀ ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




