ಕರ್ನಾಟಕದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ: ಬಿರುಗಾಳಿಯ ಮುನ್ಸೂಚನೆ ನೀಡಿದ ಐಎಂಡಿ
ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಮುಖ್ಯಾಂಶಗಳು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
- 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ
- ಬೆಂಗಳೂರಿಗೂ ಮಳೆ ಮುನ್ಸೂಚನೆ
ಬೆಂಗಳೂರು, ಸೆಪ್ಟೆಂಬರ್ 30: ಸೆಪ್ಟೆಂಬರ್ 30ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಬಳ್ಳಾರಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.
ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ಮಳೆ ಮುನ್ಸೂಚನೆ
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಬಳ್ಳಾರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲೂ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಮುಂದಿನ 5 ದಿನಗಳ ಮಳೆ ಮುನ್ಸೂಚನೆ
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ.#KSNDMC #ಎಚ್ಚರಿಕೆವಹಿಸಿ Next 4 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnatakaRains pic.twitter.com/H6iYj4OqsW
— Karnataka State Natural Disaster Monitoring Centre (@KarnatakaSNDMC) September 29, 2026
ಎಲ್ಲೆಲ್ಲಿ ಹೆಚ್ಚು ಮಳೆ?
ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡು ಕರ್ನಾಟಕದಲ್ಲಿ ದುರ್ಬಲವಾಗಿತ್ತು. ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯ ಒಂದೆರಡು ಕಡೆ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಎಂ.ಎಂ. ಹಿಲ್ಸ್‌ನಲ್ಲಿ 9 ಸೆಂ.ಮೀ ಮಳೆಯಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು HAL ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




