AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯಲ್ಲಿ ಮತ್ತೆ ಭಾರೀ ಗಾಳಿ ಮಳೆ, ಒಳನಾಡಿನಲ್ಲೂ ವರ್ಷಧಾರೆಯ ಮುನ್ಸೂಚನೆ

ಕರ್ನಾಟಕ ಹವಾಮಾನ ಜುಲೈ 30: ಕರ್ನಾಟಕ ಕರಾವಳಿ ಭಾಗದಲ್ಲಿ ಹಾಗೂ ಒಳನಾಡಿನ ಹಲವೆಡೆ ಮುಂಗಾರು ಚುರುಕಾಗಿದೆ. ಜುಲೈ 30 ಮತ್ತು 31ರಂದು ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

Karnataka Weather Forecast: ಕರಾವಳಿಯಲ್ಲಿ ಮತ್ತೆ ಭಾರೀ ಗಾಳಿ ಮಳೆ, ಒಳನಾಡಿನಲ್ಲೂ ವರ್ಷಧಾರೆಯ ಮುನ್ಸೂಚನೆ
ಬಾಗಲಕೋಟೆಯ ಇಳಕಲ್​ನಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆImage Credit source: tv9
ಗಣಪತಿ ಶರ್ಮಾ
|

Updated on: Jul 30, 2026 | 6:10 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
  • ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಬ್ಬರ ಮುಂದುವರಿಕೆ ಸಾಧ್ಯತೆ
  • ಉತ್ತರ ಒಳನಾಡಿನಲ್ಲೂ ಹಲವು ಜಿಲ್ಲೆಗಳಿಗೆ ಮಳೆ

ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕಾಗಿದ್ದು, ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ (Weather Forecast) ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದೂ ಐಎಂಡಿ ತಿಳಿಸಿದೆ.

ಜುಲೈ 30ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿಗೂ ಮಳೆ ಮುನ್ಸೂಚನೆ

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಜುಲೈ 31ರಂದು ಎಲ್ಲೆಲ್ಲಿ ಮಳೆಯಾಗಲಿದೆ?

ಜುಲೈ 31ರಂದು ಕೂಡ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ವರ್ಷಧಾರೆ ಸುರಿಯವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಹೆಚ್ಚು ಮಳೆ?

ಐಎಂಡಿ ವರದಿ ಪ್ರಕಾರ, ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.

  • ಭಾಗಮಂಡಲ, ಕೊಡಗು: 8 ಸೆಂ.ಮೀ
  • ಗೇರುಸೊಪ್ಪ, ಉತ್ತರ ಕನ್ನಡ: 7 ಸೆಂ.ಮೀ
  • ಸುಳ್ಯ, ದಕ್ಷಿಣ ಕನ್ನಡ: 7 ಸೆಂ.ಮೀ
  • ಅಗುಂಬೆ, ಶಿವಮೊಗ್ಗ: 6 ಸೆಂ.ಮೀ
  • ಕೊಲ್ಲೂರು, ಉಡುಪಿ: 5 ಸೆಂ.ಮೀ
  • ಕೊಪ್ಪ, ಚಿಕ್ಕಮಗಳೂರು: 5 ಸೆಂ.ಮೀ
  • ಮಾಣಿ, ದಕ್ಷಿಣ ಕನ್ನಡ: 5 ಸೆಂ.ಮೀ

ಮುಂದಿನ ಎರಡು ದಿನಗಳಲ್ಲೂ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ