AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 25: ಕರ್ನಾಟಕದ ಕೆಲವೆಡೆ ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on: Aug 25, 2026 | 6:56 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
  • ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲೂ ಮಳೆ
  • ಬೆಂಗಳೂರಿನಲ್ಲಿಯೂ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 25: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 25) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವುದು ಅಗತ್ಯ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಯೆಲ್ಲೋ ಅಲರ್ಟ್ ಘೋಷಿಸಿದೆ.

ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್ ಸಂದೇಶ

ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಕಲಬುರಗಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗಬಹುದು.

ಆಗಸ್ಟ್ 26ರಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ಆಗಸ್ಟ್ 26ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?

ಆಗಸ್ಟ್ 24 ರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಮುಂಗಾರು ಸಕ್ರಿಯವಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ದಾಖಲಾಗಿದೆ. ಭಾರಿ ಮಳೆಯ ಪ್ರಮಾಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ನೀಲಕುಂದದಲ್ಲಿ 9 ಸೆಂ.ಮೀ, ಬೀದರ್ ಜಿಲ್ಲೆಯ ಹುಮನಾಬಾದ್‌ನಲ್ಲಿ 8 ಸೆಂ.ಮೀ, ಕೊಡಗು ಜಿಲ್ಲೆಯ ಶ್ರೀಮಂಗಲದಲ್ಲಿ 8 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಅಗುಂಬೆಯಲ್ಲಿ 7 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 7 ಸೆಂ.ಮೀ ಹಾಗೂ ಕೊಡಗಿನ ಸಂತಹಳ್ಳಿಯಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.

ಮುಂದಿನ ಎರಡು ದಿನಗಳಲ್ಲೂ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ