AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 27: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 27 ಹಾಗೂ 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

Karnataka Weather Forecast: ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
ಮಳೆImage Credit source: tv9
ಗಣಪತಿ ಶರ್ಮಾ
|

Updated on: Jul 27, 2026 | 6:36 AM

Share

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವೆಡೆ ಭಾರಿ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿಯಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ

ಇಂದು (ಜುಲೈ 27 ರಂದು) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ. ಜುಲೈ 28 ರಂದೂ ಸಹ ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?

ಜುಲೈ 27 ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಜುಲೈ 28 ರಂದು ಬೀದರ್, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಮಳೆ ಮುನ್ಸೂಚನೆ

ಜುಲೈ 27 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಜುಲೈ 28 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಭಾನುವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಭಾಗದ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿದೆ.

ಅತೀ ಹೆಚ್ಚು ಮಳೆ ದಾಖಲಾದ ಪ್ರದೇಶಗಳು

  • ಮಂಕಿ (ಉತ್ತರ ಕನ್ನಡ) – 12 ಸೆಂ.ಮೀ.
  • ಮೂಡುಬಿದಿರೆ (ದಕ್ಷಿಣ ಕನ್ನಡ) – 12 ಸೆಂ.ಮೀ.
  • ಬೆಳ್ತಂಗಡಿ (ದಕ್ಷಿಣ ಕನ್ನಡ) – 9 ಸೆಂ.ಮೀ.
  • ಕಾರ್ಕಳ (ಉಡುಪಿ) – 8 ಸೆಂ.ಮೀ.
  • ಧರ್ಮಸ್ಥಳ (ದಕ್ಷಿಣ ಕನ್ನಡ) – 7 ಸೆಂ.ಮೀ.
  • ಮಂಗಳೂರು ವೀಕ್ಷಣಾಲಯ – 7 ಸೆಂ.ಮೀ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇರುವುದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!