AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ: ಕರಾವಳಿಯಲ್ಲಿ ಮಳೆ ಚುರುಕು, ಒಳನಾಡಿನಲ್ಲೂ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಸೆಪ್ಟೆಂಬರ್ 27: ಕರ್ನಾಟಕದಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಳೆ ಚುರುಕಾಗಲಿದ್ದು, ಸೆಪ್ಟೆಂಬರ್ 28ರಂದು ಮೈಸೂರು, ಚಾಮರಾಜನಗರ ಮತ್ತು ಕೊಡಗಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು.

ಕರ್ನಾಟಕ ಹವಾಮಾನ: ಕರಾವಳಿಯಲ್ಲಿ ಮಳೆ ಚುರುಕು, ಒಳನಾಡಿನಲ್ಲೂ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Sep 27, 2026 | 6:43 AM

Share

ಮುಖ್ಯಾಂಶಗಳು

  • ಕರಾವಳಿಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ
  • ಕೊಡಗು, ಮೈಸೂರು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ
  • ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ

ಬೆಂಗಳೂರು, ಸೆಪ್ಟೆಂಬರ್ 27: ಕರ್ನಾಟಕದ ಹಲವೆಡೆ ಮತ್ತೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಸೆಪ್ಟೆಂಬರ್ 27 ಮತ್ತು 28ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಗಾಳಿಯ ವೇಗ ಹೆಚ್ಚಿರುವ ಸಾಧ್ಯತೆಯೂ ಇದೆ.

ಸೆಪ್ಟೆಂಬರ್ 27ರಂದು ಎಲ್ಲೆಲ್ಲಿ ಮಳೆ?

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಬಹುದು. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಸೆಪ್ಟೆಂಬರ್ 28ರಂದು ಮಳೆ ಮತ್ತಷ್ಟು ಚುರುಕು

ಸೆಪ್ಟೆಂಬರ್ 28ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮುಂಗಾರು ಹೇಗಿದೆ?

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಶನಿವಾರ ಸಂಜೆಗೆ ಕೊನೆಗೊಂಡಂತೆ ಕರಾವಳಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದರೆ, ಒಳನಾಡು ಕರ್ನಾಟಕದಲ್ಲಿ ದುರ್ಬಲವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಹಲವೆಡೆ, ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ತಲಾ 4 ಸೆಂ.ಮೀ., ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ