AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21 ಮತ್ತು 22ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವು ಭಾಗಗಳಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಮಳೆImage Credit source: tv9
ಗಣಪತಿ ಶರ್ಮಾ
|

Updated on: Sep 21, 2026 | 7:07 AM

Share

ಬೆಂಗಳೂರು, ಸೆಪ್ಟೆಂಬರ್ 21: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು (ಸೆಪ್ಟೆಂಬರ್ 21ರಂದು) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನಲ್ಲಿ ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಇಂದೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಸೆಪ್ಟೆಂಬರ್ 22ರಂದು ಎಲ್ಲೆಲ್ಲಿ ಮಳೆ?

ಸೆಪ್ಟೆಂಬರ್ 22ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆಯಾಯ್ತು?

ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಕೆಐಎಎಲ್‌ ವೀಕ್ಷಣಾಲಯದಲ್ಲಿ 9 ಮಿ.ಮೀ, ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಮಿ.ಮೀ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 7 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

LIVE TV

ರಾಜ್ಯದ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಕರ್ನಾಟಕದಲ್ಲಿ ತುಸು ದುರ್ಬಲವಾಗಿತ್ತು ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ