
ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕದಲ್ಲಿ ಸೆಪ್ಟೆಂಬರ್ 23 ಮತ್ತು 24ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಸೆ.24ರಂದು ಭಾರಿ ಮಳೆಯ ಸಾಧ್ಯತೆ ಇದ್ದರೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಸೆಪ್ಟೆಂಬರ್ 23ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ.23ರಂದು ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆ.24ರಂದು ಇದೇ ಮೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
#ಮಳೆ #ಮುನ್ನೆಚ್ಚರಿಕೆ :#Heavy #rainfall (64.5mm to 115.4mm) #Warning for #Karnataka#Yellow #Alert@KarnatakaVarthe #KSNDMC #KarnatakaRains #SouthwestMonsoon @DCRaichur @DcDharwad @dc_gadag @deobelagavi @DeputyCommissi8 @DEO_CHIKMAGALUR @Deo_dc_hassan @dcuttarakannada @dcudupi pic.twitter.com/6BtF5UxAWL
— Karnataka State Natural Disaster Monitoring Centre (@KarnatakaSNDMC) September 22, 2026
ಸೆ.23ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಯಾದಗಿರಿ, ಧಾರವಾಡ, ರಾಯಚೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಲಿದೆ. ಸೆ.24ರಂದು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಲಿದೆ.
ಸೆ.23ರಂದು ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಸೆ.24ರಂದು ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಐಎಂಡಿ ಮಾಹಿತಿ ಪ್ರಕಾರ, ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಒಳನಾಡು ಕರ್ನಾಟಕದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಯಡ್ರಾಮಿ 8 ಸೆಂ.ಮೀ. ಭಾರಿ ಮಳೆ ದಾಖಲಿಸಿದೆ. ಬೆಂಗಳೂರು ನಗರ ಜಿಲ್ಲೆಯ ಹೆಸರಘಟ್ಟ 6 ಸೆಂ.ಮೀ., ವಿಜಯಪುರ ಜಿಲ್ಲೆಯ ಇಂಡಿ 6 ಸೆಂ.ಮೀ. ಹಾಗೂ ಕೊಪ್ಪಳ ಜಿಲ್ಲೆಯ ಕುಕನೂರು 5 ಸೆಂ.ಮೀ. ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ