Karnataka Weather Forecast: ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಇನ್ನೂ 3 ದಿನ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 3: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನ ಮಳೆ ಮುಂದುವರಿಯಲಿದೆ. ಆಗಸ್ಟ್ 7ರವರೆಗೆ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದ ಹಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Karnataka Weather Forecast: ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಇನ್ನೂ 3 ದಿನ ಮಳೆ ಮುನ್ಸೂಚನೆ
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿರುವುದು
Image Credit source: tv9

Updated on: Aug 03, 2026 | 6:52 AM

ಮುಖ್ಯಾಂಶಗಳು

  • ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ
  • ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ
  • ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಇಂದು ರಜೆ

ಬೆಂಗಳೂರು, ಆಗಸ್ಟ್ 3: ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ಪ್ರಕಾರ, ಆಗಸ್ಟ್ 7ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ, ಮಲೆನಾಡಿನಲ್ಲಿ ಹೆಚ್ಚು ಮಳೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಕೊಡಗು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡಬಿದಿರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಪ್ರೌಢಶಾಲೆವರೆಗೆ ರಜೆ ನೀಡಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಪಿಯುಸಿವರೆಗಿನ ತರಗತಿಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಮುಂದುವರಿದ ವರುಣನ ಅಬ್ಬರ, ಈ ಜಿಲ್ಲೆಗಳತಾಲೂಕುಗಳಲ್ಲಿ ಆ.3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us